ಬೆಂಗಳೂರು:- ಬನ್ನೇರುಘಟ್ಟ ಸಮೀಪದ ರಾಗಿಹಳ್ಳಿ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ ಪರಿಣಾಮ ಈ ಅವಘಡ ಸಂಭವಿಸಿದೆ. ಸಹಾಹುಕ್ ಮತ್ತು ಅರ್ಶು ಮೃತರು ಇವರು ಕೇರಳ ಮೂಲದವರು ಎನ್ನಲಾಗಿದೆ. ಗಾಯಗೊಂಡವರನ್ನು ದೇವ ನಾರಾಯಣ ಮತ್ತು ಸಾಹಿಲ್ ಎಂದು ಗುರುತಿಸಲಾಗಿದೆ. ನಾಲ್ವರು ಗೊಟ್ಟಿಗೆರೆಯ ಕಾಲೇಜೊಂದರ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಸಿಫ್ಟ್ ಕಾರಿನಲ್ಲಿ ಅತಿವೇಗವಾಗಿ ಬಂದು ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



