ಮೈಸೂರು: ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗೋವಿಂದೇಗೌಡ (65) ಸಾವಿಗೀಡಾದ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ.
Advertisement
ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.