ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆಯನ್ನು ಗದಗ ತಾಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ, ತಹಸೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರಿಶೀಲಿಸಿದರು.
ಗ್ರಾಮಸ್ಥರು ಎದುರಿಸುತ್ತಿರುವ ಕುಡಿಯುವ ನೀರಿನ ಬವಣೆ ಕುರಿತು ಪತ್ರಿಕೆಯ ವರದಿ ಆಧರಿಸಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗೆ ಸ್ಪಂದಿಸಿದೆ.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕ್ ರಾವ್ ಪಾಟೀಲ್ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರಿಂದ ಮಾಹಿತಿ ಪಡೆದ ಅವರು, ಪ್ರಸ್ತುತ ಕುಡಿಯುವ ನೀರನ್ನು ಪರೀಕ್ಷೆ ಮಾಡಿಯೇ ಎರೇ ಹಂಚಿನಾಳ ಗ್ರಾಮದಿಂದ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲಾಗುತ್ತಿದ್ದು, ಗ್ರಾಮದಲ್ಲಿ ನೀರಿನ ಹೆಚ್ಚಿನ ಬೇಡಿಕೆ ಇದ್ದಲ್ಲಿ ಹೆಚ್ಚಿನ ಟ್ಯಾಂಕರ್‌ಗಳ ಮೂಲಕ ಒದಗಿಸಲು RWS ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ನಿರ್ದೇಶಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.