ಹಾವೇರಿ: ಬಸ್ ಚಾಲಕನು ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣದ ಸತ್ಯಾತ್ಯತೆ ತಿಳಿಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತನಿಖೆಗೆ ಸೂಚಿಸಿದ್ದರು.
ಇದೀಗ ಕರ್ತವ್ಯಲೋಪ ಆರೋಪದಲ್ಲಿ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ. ವಿಚಾರಣೆ ಮುಗಿಯುವವರೆಗೂ ಅಮಾನತು ಮಾಡಿ ಆದೇಶಿಸಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.
ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿ ನಡುವಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ನ ಚಾಲಕ ಕಂ ನಿರ್ವಾಹಕ ಮುಲ್ಲಾ ಮಾರ್ಗಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದರು. ನಮಾಜ್ ಮಾಡುತ್ತಿರುವ ವಿಡಿಯೋವನ್ನು ಪ್ರಯಾಣಿಕನೋರ್ವ ಸೆರೆಹಿಡಿದಿದ್ದ, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಡ್ರೈವರ್ ಮುಲ್ಲಾ ನಡೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು.