ಆಟೋ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ ಯುವತಿಗೆ ಅಸಭ್ಯವಾಗಿ ನಿಂದನೆ: ಚಾಲಕ ಅರೆಸ್ಟ್

0
Spread the love

ಬೆಂಗಳೂರು:- ಆಟೋ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ ಯುವತಿಗೆ ಅಸಭ್ಯವಾಗಿ ನಿಂದಿಸಿದ ಚಾಲಕನನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಪವನ್ ಬಂಧಿತ ಆರೋಪಿ. ಆಟೋ ವಿಚಾರವಾಗಿ ಈಶಾನ್ಯ ಭಾರತ ಮೂಲದ ಯುವತಿ ಜೊತೆಗೆ ಈತನ ಗಲಾಟೆಯ ವಿಡಿಯೋ ವೈರಲ್​ ಆಗಿತ್ತು. ಅಕ್ಟೋಬರ್ 2ರ ಸಂಜೆ 7.30ರ ಸುಮಾರಿಗೆ ಈಶಾನ್ಯ ಭಾರತ ಮೂಲದ ಯುವತಿ ಕ್ಯಾಲಸನಹಳ್ಳಿಯಿಂದ ಬಾಣಸವಾಡಿಗೆ ತೆರಳಲು ಆಟೋ ಬುಕ್ ಮಾಡಿದ್ದಳು. ಆದರೆ ಬುಕ್ ಮಾಡಿದ್ದ ಆಟೋ ಬರೋದು ತಡವಾದ ಕಾರಣ, ಈ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಆಟೋವನ್ನು ಆಕೆ ಹತ್ತಿದ್ದಳು. ಹಾಗೆಯೇ ಬುಕ್​ ಮಾಡಿದ್ದ ಆಟೋವನ್ನು ಕ್ಯಾನ್ಸಲ್​ ಮಾಡಿದ್ದಳು.

ಆದರೆ ಈ ವೇಳೆಗೆ ಬುಕ್​ ಮಾಡಿದ್ದ ಆಟೋ ಕೂಡ ಸ್ಥಳ ತಲುಪಿದ್ದು, ಬೇರೆ ಆಟೋ ಹತ್ತಿ ಹೊರಟ ಯುವತಿ ಬಳಿ ಚಾಲಕ ಪವನ್ ಜಗಳ ತೆಗೆದಿದ್ದಾರೆ. ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಹೊಡೆಯಲು ಯತ್ನ ಮಾಡಿರುವ ಬಗ್ಗೆ ಯುವತಿ ಆರೋಪಿಸಿದ್ದಳು. ಘಟನೆ ಬಗ್ಗೆ ಕೊತ್ತನೂರು ಠಾಣೆಗೆ ದೂರನ್ನೂ ನೀಡಿದ್ದಳು. ಆ ದೂರು ಆಧರಿಸಿ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here