ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಡ್ರೈವರ್ ಗೆ ಪಿಟ್ಸ್ ಕಾಣಿಸಿಕೊಂಡ ಪರಿಣಾಮ ಸರಣಿ ಅಪಘಾತ ಸಂಭವಿಸಿರುವ ಘಟನೆ ಡಿಸೆಂಬರ್ 25ರ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಡಕಶಿರದ ಮಾರುತಿನಗರದ ಬಳಿ ನಡೆದಿದೆ. ಆಕ್ಸಿಡೆಂಟ್ ವೇಳೆ ಬಸ್ ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
Advertisement
ಪಾವಗಡ ಟು ಬೆಂಗಳೂರು ಸಂಚಾರ ಮಾಡುತ್ತಿದ್ದ ವೇಳೆ ಬಸ್ ಚಾಲಕನಿಗೆ ಫಿಟ್ಸ್ ಬಂದಿತ್ತಂತೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು, ಒಂದು ಗೂಡ್ಸ್ ಆಟೋ ಮತ್ತು ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಇನ್ನೂ ಘಟನೆಯಲ್ಲಿ ಓರ್ವ ರೈತನಿಗೆ ತೀವ್ರ ಗಾಯವಾಗಿದ್ದು, ವಿಕ್ಟೋರಿಯ ಆಸ್ಪತ್ರೆಯಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆ ಸಂಬಂಧ ಮಡಕಶಿರ ಪೋಲಿಸರು ಎಫ್ಐಆರ್ ದಾಖಲಿಸಿ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ.