ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಬುಲೇರೋ ಪಿಕಪ್ ವಾಹನ ಸೇತುವೆಗೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಲೋಕದೊಳಲು ಸಮೀಪ ನಡೆದಿದೆ.
Advertisement
ಹೊಳಲ್ಕೆರೆ ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದ ಧರಣೇಶ್ (58), ರಂಗಸ್ವಾಮಿ (45) ಮೃತ ದುರ್ದೈವಿಗಳಾಗಿದ್ದು, ಘಟನೆಯಲ್ಲಿ ಬಸವರಾಜ್, ಪ್ರದೀಪ್, ಕೃಷ್ಣ, ರುದ್ರೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನ ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.