ಕೊಪ್ಪಳ:- ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಪ್ರೇಮಾ (18) ಮೃತರು. ಆಟೋದಲ್ಲಿದ್ದ ಇನ್ನುಳಿದ ಐವರ ಸ್ಥಿತಿ ಗಂಭೀರವಾಗಿದೆ. ಇವರು ಗಂಗಾವತಿ ತಾಲೂಕು ಬಸಾಪಟ್ಟಣ ಗ್ರಾಮದವರು ಎನ್ನಲಾಗಿದೆ. ಯುವತಿ ಸೇರಿದಂತೆ ಆಟೋದಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಯುವತಿ ಬಸಾಪಟ್ಟಣದಿಂದ ಗಂಗಾವತಿಗೆ ತೆರಳುತ್ತಿದ್ದಳು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸ್ಥಳಕ್ಕೆ ಗಂಗಾವತಿ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


