ಆನೇಕಲ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಜರುಗಿದೆ. ಬಿಜಾಪುರದ ಸಂಗಮೇಶ್ (50) ಎಂಬ ದುರ್ದೈವಿ ಕಾರು ಡಿಕ್ಕಿಯಿಂದ ತಲೆಗೆ ಗಂಭೀರ ಗಾಯಗೊಂಡು, ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂಗಮೇಶ್ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಜಿಗಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಮತ್ತು ತನಿಖೆ ಮುಂದುವರಿದಿದೆ.



