ರಾಯಚೂರು:- ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಗ್ಗಿಲಿಮಂಡಲಂನ ರಾತನ ಗ್ರಾಮ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿರುವ ಘಟನೆ ಜರುಗಿದೆ.
ರಾಜಧಾನಿ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಬಸ್ನ ಸ್ಟೇರಿಂಗ್ ಕತ್ತರಿಸಿ ಚಾಲಕನ ನಿಯಂತ್ರಣ ತಪ್ಪಿದ್ದು, ಪರಿಣಾಮ ಪಲ್ಟಿ ಹೊಡೆದು ಪಕ್ಕದ ಜಮೀನಿಗೆ ಉರುಳಿದೆ. ಬಸ್ನಲ್ಲಿದ್ದ 29 ಜನರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸದ್ಯ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆಂಧ್ರಪ್ರದೇಶದ ತುಗ್ಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.



