ತಪ್ಪಿದ ಚಾಲಕನ ನಿಯಂತ್ರಣ: ಪಲ್ಟಿ ಹೊಡೆದ ಖಾಸಗಿ ಬಸ್ – ಐವರಿಗೆ ಗಾಯ!

0
Spread the love

ಹಾವೇರಿ:- ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದಲ್ಲಿರುವ 48ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ಜರುಗಿದೆ.

Advertisement

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 13 ಜನರ ಪೈಕಿ 5 ಜನರು ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಖಾಸಗಿ ಬಸ್ ಪುಣೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಣೇಬೆನ್ನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here