ತಪ್ಪಿದ ಚಾಲಕನ ನಿಯಂತ್ರಣ.. ಕಂದಕಕ್ಕೆ ಉರುಳಿದ ಸಾರಿಗೆ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0
Spread the love

ಕಾರವಾರ:- ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಜರುಗಿದೆ.

Advertisement

ಹಾನಗಲ್‌ನಿಂದ ಹೊರಟಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಸಿದ್ದಾಪುರ ಮಾರ್ಗವಾಗಿ ಹೊನ್ನಾವರದ ಕಡೆಗೆ ಬರುತ್ತಿತ್ತು. ಘಟ್ಟ ಪ್ರದೇಶದ ಇಳಿಜಾರಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆಯ ಎಡಬದಿಯ ತಗ್ಗು ಪ್ರದೇಶಕ್ಕೆ ಬಿದ್ದಿದೆ.

ಅಪಘಾತದಲ್ಲಿ ಬಸ್ ಚಾಲಕ, ನಿರ್ವಾಹಕ ಸೇರಿದಂತೆ ಬಸ್ಸಿನಲ್ಲಿದ್ದ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here