ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. ನೀಲಪ್ಪ ಮೂಲಿಮನಿ( 23), ಸುದೀಪ್ ಕೋಟಿ( 18) ಮೃತ ದುರ್ದೈವಿಗಳಾಗಿದ್ದು,
ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಬೆಳಿಗ್ಗೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿದ್ದ ಯುವಕರ 7 ಜನರ ತಂಡ, ಮುಂದೆ ಇದ್ದ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತವಾಗಿರೋ ಶಂಕೆಯಾಗಿದೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



