ಬೆಳಗಾವಿ: ಶಾಲೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಬಸ್ ನಲ್ಲಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮುಗಳಖೋಡದ ಕನ್ನಡ, ಆಂಗ್ಲ ಮಾಧ್ಯಮ ಶಾಲೆಯ ಬಸ್ ಪಲ್ಟಿಯಾಗಿದ್ದು,
30 ಕ್ಕೂ ಹೆಚ್ವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಾಲಕನ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಮೂಡಲಗಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



