ದಾವಣಗೆರೆ:- ಇಲ್ಲಿನ ಚನ್ನಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಪ್ರಾಪ್ತ ಬಾಲಕ ಬೈಕ್ ಚಾಲನೆ ಮಾಡಿದ ಹಿನ್ನೆಲೆ ಪೋಷಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ.
Advertisement
ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾಗ ಬಾಲಕನೊಬ್ಬ ಬೈಕ್ ಚಲಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಬೈಕ್ ವಶಕ್ಕೆ ಪಡೆದ ಪೊಲೀಸರು ಪರಿಶೀಲನೆ ನಡೆಸಿದರು. ಆತ ಅಪ್ರಾಪ್ತ ಎಂದು ತಿಳಿದುಬಂದಿದ್ದು, ಕೂಡಲೇ ಕ್ರಮ ಕೈಗೊಂಡ ಪೊಲೀಸರು ಪಾಲಕರಿಗೆ 25,000 ರೂ. ದಂಡ ವಿಧಿಸಿದ್ದಾರೆ.
ಹೀಗಾಗಿ ಪ್ರತಿಯೊಬ್ಬರು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮನವಿ ಮಾಡಿದ್ದಾರೆ.