Karnataka Weather: ಈ ಜಿಲ್ಲೆಗಳಲ್ಲಿ ಮಾತ್ರ ಜಿನುಗು ಮಳೆ: ಮಿಕ್ಕೆಲ್ಲಾ ಕಡೆ ಚಳಿ ವಾತವರಣ

0
Spread the love

ಬೆಂಗಳೂರು:- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯ ವಾತಾವರಣ ಮುಂದುವರೆದಿದ್ದು, ಕೆಲವೇ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದೆ ಅಷ್ಟೆ.

Advertisement

ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ನಿಂತು ಹೋಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜಿ ಕವಿದ ವಾತಾವರಣ ಇದ್ದರೂ ಆಗಾಗ ಜಿನುಗು ರೀತಿಯಲ್ಲಿ ಮಳೆಯಾಗುತ್ತಿರುತ್ತದೆ. ಇನ್ನು ಬಿಸಿಲಿನ ತಾಪಮಾನ ಮಾತ್ರ ದಿನದಿಂದ ದಿನಕ್ಕೆ ನಗರಲ್ಲಿ ಕಡಿಮೆಯಾಗುತ್ತಿದೆ.

ಇನ್ನು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದೆ. ಎರಡು ದಿನಗಳಿಂದ ಕನಿಷ್ಠ ಉಷ್ಣಾಂಶ ಕುಸಿತದದಿಂದಾಗಿ ಈ ಭಾಗದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ. ಕನಿಷ್ಠ ಉಷ್ಣಾಂಶ 20 ಡಿಗ್ರಿಗಿಂತ ಕಡಿಮೆಯಿರುವುದು ಚಳಿಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ರಾಜ್ಯದ ದಕ್ಷಿಣ ಭಾಗದ ಕೆಲವೆಡೆ ಗುರುವಾರ (ಡಿಸೆಂಬರ್‌ 21) ಮಳೆ ಬೀಳುವ ಮುನ್ಸೂಚನೆಯನ್ನು ನೀಡಿದೆ. ಇನ್ನುಳಿದ ಕಡೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆಯ ಸೂಚನೆ ಇಲ್ಲ ಎಂದು ತಿಳಿಸಿದೆ.

ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳವಾರ (ಡಿಸೆಂಬರ್‌ 19) ವಿಜಯಪುರದಲ್ಲಿ 14.2 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾದರೆ, ಬೀದರ್‌ನಲ್ಲಿ 15 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಬಾಗಲಕೋಟೆಯಲ್ಲಿ 17.9 ಡಿಗ್ರಿ ಸೆಲ್ಸಿಯಸ್‌, ಗದಗ ಹಾಗೂ ಧಾರವಾಡದಲ್ಲಿ 18 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

ಇನ್ನು ಬೆಳಗಾವಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಟ ಉಷ್ಣಾಂಶ ದಾಖಲಾದರೆ, ಕಲಬುರಗಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್‌, ಕೊಪ್ಪಳದಲ್ಲಿ 19.2 ಡಿಗ್ರಿ ಸೆಲ್ಸಿಯಸ್‌, ಬೆಳಗಾವಿ ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ. ರಾಯಚೂರಿನಲ್ಲಿ 20 ಡಿಗ್ರಿ, ಹಾವೇರಿಯಲ್ಲಿ 20.2 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಒಳನಾಡಿನಲ್ಲೂ ಕೆಲ ದಿನಗಳಿಂದ ಚಳಿಯ ವಾತಾರಣವೇ ಮುಂದುವರೆದಿದೆ. ಬೆಂಗಳೂರಿನಲ್ಲಿ 17.7 ಡಿಗ್ರಿ ಸೆಲ್ಸಿಯಸ್‌, ಬೆಂಗಳೂರು KIA ವಿಮಾನ ನಿಲ್ದಾಣ ಸುತ್ತಮುತ್ತ 17.1 ಡಿಗ್ರಿ ಸೆಲ್ಸಿಯಸ್‌, ಚಿಕ್ಕಮಗಳೂರಿನಲ್ಲಿ 14.4 ಡಿಗ್ರಿ, ಚಿತ್ರದುರ್ಗದಲ್ಲಿ 17.8 ಡಿಗ್ರಿ ಸೆಲ್ಸಿಯಸ್‌, ಶಿವಮೊಗ್ಗದಲ್ಲಿ 19.6 ಡಿಗ್ರಿ, ಮಡಿಕೇರಿಯಲ್ಲಿ18.9 ಡಿಗ್ರಿ, ಚಾಮರಾಜನಗರದಲ್ಲಿ 18.7 ಡಿಗ್ರಿ, ದಾವಣಗೆರೆಯಲ್ಲಿ 19 ಡಿಗ್ರಿ, ಮಂಡ್ಯದಲ್ಲಿ 19.2 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ.

ಕರಾವಳಿಯಲ್ಲಿ ಭಿನ್ನ ವಾತಾವರಣ. ಇಲ್ಲಿ ಕನಿಷ್ಠ ಉಷ್ಣಾಂಶ ಕೊಂಚ ಹೆಚ್ಚೇ ಇದೆ. ಅಂದರೆ ಉತ್ತರ ಕನ್ನಡದ ಶಿರಾಲಿಯಲ್ಲಿ21 ಡಿಗ್ರಿ ಸೆಲ್ಸಿಯಸ್‌, ಹೊನ್ನಾವರದಲ್ಲಿ 25.4 ಡಿಗ್ರಿ, ಕಾರವಾರದಲ್ಲಿ 25.7 ಡಿಗ್ರಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ 24.9 ಡಿಗ್ರಿ ಹಾಗೂ ಪಣಂಬೂರಿನಲ್ಲಿ 24.1 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ಗುರುವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದಲ್ಲಿ ಒಣ ಹವೆಯಿರಲಿದ್ದು, ಮಳೆಯಾಗುವ ಸೂಚನೆಗಳಿಲ್ಲ ಎಂದು ತಿಳಿಸಿದೆ.


Spread the love

LEAVE A REPLY

Please enter your comment!
Please enter your name here