ಮಂಗಳೂರು:ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮತ್ತು ಚರಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
ತೈಸಿರ್ ಇಸ್ಮಾಯಿಲ್ ಹುಸೈನ್, ಹಾಗೂ ರೋಯಸ್ಟನ್ ಕ್ಸವಿಯರ್ ಲೋಬೋ ಬಂಧಿತರು. ಬಂಧಿತರಿಂದ 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಿಂದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಖರೀದಿಸಿಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಇಬ್ಬರು ಲಾಕ್ ಆಗಿದ್ದು, ತನಿಖೆ ಕೈಗೊಂಡಿದ್ದಾರೆ.