ಬೆಂಗಳೂರು: ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ನಾಯಿಗೆ ನೀಡುವ ಫುಡ್ ಪ್ಯಾಕೇಟ್‌ನಲ್ಲಿಟ್ಟು ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಈ ವೇಳೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.
ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಬೆಂಗಳೂರಿನ ಮನೆಯಲ್ಲಿ 40 ಡೆಬಿಟ್ ಕಾರ್ಡ್, 70 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೇ ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.



