ಆನೇಕಲ್:- ಕುಡಿದ ಮತ್ತಲ್ಲಿ ಹೊಡೆದಾಡಿಕೊಂಡ 6 ಬಿಹಾರಿಗಳ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಜರುಗಿದೆ.
19 ವರ್ಷದ ಅನ್ಸು, 20 ವರ್ಷದ ರಾಧೆ ಶ್ಯಾಮ್ ಮತ್ತು ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸರ್ಜಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದ ನಿರ್ಮಾಣ ಹಂತದ ಪೋರ್ ವಾಲ್ ಅವೆನ್ಯೂ ಅಪಾರ್ಟ್ಮೆಂಟ್ನ 3ನೇ ಮಹಡಿಯಲ್ಲಿ ಜರುಗಿದೆ.
ಹೋಳಿ ಹಬ್ಬದ ರಜೆ ಹಿನ್ನೆಲೆ ಬಿಹಾರದ ಒಂದೇ ಗ್ರಾಮದ ವಾಸಿಗಳು ಇಂದು ಬೆಳಗ್ಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕೈಗೆ ಸಿಕ್ಕ ದೊಣ್ಣೆ ಮತ್ತು ರಾಡ್ನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಲ್ಲೆ ವೇಳೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.



