ಇಂಧೋರ್:– ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
Advertisement
ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಮೊದಲು ಬೈಕ್ಗೆ ಡಿಕ್ಕಿ ಹೊಡೆದಿದೆ. ನಂತರವೂ ಟ್ರಕ್ ಮುಂದೆ ಚಲಿಸುತ್ತಲೇ ಇತ್ತು. ಕಾರುಗಳು, ಇ-ರಿಕ್ಷಾಗಳು, ಆಟೋರಿಕ್ಷಾಗಳು ಮತ್ತು ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದೆ. ಜನರು ಕಿರುಚುತ್ತಾ ಓಡುತ್ತಿದ್ದರು, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. ನಜ್ಜುಗುಜ್ಜಾದ ಬೈಕಿಗೆ ಬೆಂಕಿ ಹೊತ್ತಿಕೊಂಡಿತು ಜ್ವಾಲೆಗಳು ಟ್ರಕ್‌ನ ಮುಂಭಾಗವನ್ನು ಆವರಿಸಿದ ಪರಿಣಾಮ ಮಧ್ಯೆ ಸಿಲುಕಿದ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ.