ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಒಣಹವೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನವೆಂಬರ್ 17ರಿಂದ ಮುಂದಿನ ಎರಡು ದಿನಗಳವರೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಊಹಿಸಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಭಾಗ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಅತಿ ಕಡಿಮೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗ
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಸದ್ಯಕ್ಕೆ ಮಳೆ ಸಾಧ್ಯತೆ ಕಡಿಮೆಯಿದ್ದು, ಒಣ ಹವೆಯೇ ಮುಂದುವರಿಯಲಿದೆ.
ಉತ್ತರ ಒಳನಾಡು ಭಾಗ
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳು ಸಂಪೂರ್ಣ ಒಣಹವೆಯನ್ನು ಎದುರಿಸಲಿವೆ.
ಬೆಂಗಳೂರು ನಗರದ ಹವಾಮಾನ
ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಹಾಗೂ ಕನಿಷ್ಠ ತಾಪಮಾನ 18°C ದಾಖಲಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 10 ಕಿ.ಮೀ. ಇರಲಿದೆ. ರಾಜ್ಯಾದ್ಯಂತ ಮುಂದಿನ ದಿನಗಳಲ್ಲೂ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



