HomeBengaluru Newsಕರ್ನಾಟಕದಲ್ಲಿ ಇಂದು ಒಣಹವೆಯ ವಾತಾವರಣ: ಹವಾಮಾನ ಇಲಾಖೆ ಮುನ್ಸೂಚನೆ!

ಕರ್ನಾಟಕದಲ್ಲಿ ಇಂದು ಒಣಹವೆಯ ವಾತಾವರಣ: ಹವಾಮಾನ ಇಲಾಖೆ ಮುನ್ಸೂಚನೆ!

For Dai;y Updates Join Our whatsapp Group

ಬೆಂಗಳೂರು:- ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಕರಾವಳಿಯಲ್ಲೂ ಸಧ್ಯಕ್ಕೆ ವರುಣಾರ್ಭಟ ನಿಂತಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 18°C ಇರಲಿದೆ. ಗಾಳಿಯ ವೇಗ ಗಂಟೆಗೆ 13 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img