ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ಗದಗ ತಹಸೀಲ್ದಾರರ ಕಚೇರಿಯೆದುರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿಯಿಂದ ಬೆಂಬಲ ವ್ಯಕ್ತಪಡಿಸಿದರು.
ಗದಗ ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ್ ಅರಬರ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಗಳ ಬೇಡಿಕೆಗಳು ನ್ಯಾಯತವಾಗಿವೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಕಚೇರಿ ಪರಿಕರಗಳು, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಲ್ಯಾಪ್ಟಾಪ್, ಪ್ರಿಂಟರ್ ಇತ್ಯಾದಿಗಳನ್ನು ಒದಗಿಸಬೇಕು. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಸರ್ಕಾರ ಕೂಡಲೇ ಗಂಭೀರವಾಗಿ ಪರಿಗಣಿಸಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಅಧ್ಯಕ್ಷ ನಾಗರಾಜ್ ಗೋಕಾವಿ, ರಮೇಶ್ ಚಲವಾದಿ, ಮುತ್ತಪ್ಪ ಭಜಂತ್ರಿ, ಕೆಂಚಪ್ಪ ಮ್ಯಾಗೇರಿ, ಸಂತೋಷ್ ಬಣಕಾರ ಮುಂತಾದವರು ಉಪಸ್ಥಿತರಿದ್ದರು.



