ಬೆಂಗಳೂರು:- ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ಜರುಗಿದೆ.
Advertisement
ಹಿಮಾಂಶು, ಪ್ರಕಾಶ್ ಮೃತರು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೀಣ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸೆಂಟ್ರಿಂಗ್ ಹಾಕಿ ಆರ್.ಸಿ.ಸಿ ಹಾಕುವ ಕೆಲಸ ನಡೆಯುತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಐದನೇ ಅಂತಸ್ತಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ನಡೆಯುತಿತ್ತು. ಈ ಸಂದರ್ಭದಲ್ಲಿ ನಿರ್ಮಾಣ ಮಾಡುತ್ತಿದ್ದ ಸೆಂಟ್ರಿಂಗ್ ಕುಸಿದಿದೆ.