ಚಿಕ್ಕಮಗಳೂರು: ಶೃಂಗೇರಿಯ ಎಸ್.ಕೆ. ಬಾರ್ಡರ್ ಬಳಿ ಚಲಿಸುತ್ತಿದ್ದ ರೆನಾಲ್ಟ್ ಡಸ್ಟರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ದಂಪತಿ ಹಾಗೂ ಅವರ ಪುತ್ರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಂಪತಿ ಕುಂದಾಪುರದಿಂದ ಶೃಂಗೇರಿ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಾರ್ಗಮಧ್ಯೆ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಕೂಡಲೇ ಕಾರನ್ನು ನಿಲ್ಲಿಸಿದ ಚಾಲಕ, ದಂಪತಿ ಹಾಗೂ ಪುತ್ರನೊಂದಿಗೆ ಹೊರಗೆ ಬಂದಿದ್ದಾರೆ. ಇದರಿಂದ ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.









