ಐತಿಹಾಸಿಕ ಪ್ರಸಿದ್ಧ ಕಮಲಶಿಲೆ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಿ ದೇಗುಲಕ್ಕೆ ನುಗ್ಗಿದ ಕುಬ್ಜ ನದಿ ನೀರು!

0
Spread the love

ಉಡುಪಿ: ಕರ್ನಾಟಕದ ಮಲೆನಾಡು ಭಾಗ ಮತ್ತು ಕೇರಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ನದಿಗಳು ಉಕ್ಕೇರಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದ ಹರಿದುಬರುತ್ತಿದೆ. ನಿರಂತರ ಮಳೆಯಿಂದಾಗಿ ಶಿರಾಡಿ, ಚಿಕ್ಕಮಗಳೂರು, ಚಾರ್ಮಾಡಿ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಸಂಭವಿಸಿದೆ. ಇದಲ್ಲದೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ.

Advertisement

ಪಶ್ಚಿಮ ಘಟ್ಟದ ತಪ್ಪಲು ಹೆಬ್ರಿ- ಕಾರ್ಕಳ ದಲ್ಲಿ ನಿರಂತರ ಮಳೆಯಾಗುತ್ತಿದೆ. ಕುಬ್ಜಾ ನದಿ ಮತ್ತೆ ತುಂಬಿ ಹರಿಯುತ್ತಿದೆ. ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇಗುಲಕ್ಕೆ ನೀರು ನುಗ್ಗಿದ್ದು. ಈ ವರ್ಷದಲ್ಲಿ ಎರಡನೇ ಬಾರಿಗೆ ನದಿ ನೀರು ದೇಗುಲದ ಗರ್ಭಗುಡಿಗೆ ಪ್ರವೇಶಿಸಿದೆ. ನಿನ್ನೆ ರಾತ್ರಿ 12.30 ರಿಂದ 2 ಗಂಟೆಯವರೆಗೆ ದೇಗುಲಕ್ಕೆ ನದಿ ನೀರು ಪ್ರವೇಶಿಸಿ ದುರ್ಗಾಪರಮೇಶ್ವರಿ ದೇವಿಯ ಪಾದ ಸ್ಪರ್ಶಿಸಿದೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು.


Spread the love

LEAVE A REPLY

Please enter your comment!
Please enter your name here