ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಕೆಜೆ ಜಾರ್ಜ್​ಗೆ ಬಿಗ್ ರಿಲೀಫ್

0
Spread the love

ಬೆಂಗಳೂರು: ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಹೌದು ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಇಡೀ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡಿತ್ತು. ಈ ಪ್ರಕರಣ ಸಚಿವ ಕೆಜೆ ಜಾರ್ಜ್​ ಕುತ್ತಿಗೆ ಸುತ್ತಿಕೊಂಡಿತ್ತು.

Advertisement

ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್‍ನಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ತಿಳಿಸಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು.

ಬಳಿಕ ಹೈಕೋರ್ಟ್​ ಈ ಕೇಸ್​ನಲ್ಲಿ ಜಾರ್ಜ್​ ಪಾತ್ರವಿಲ್ಲ ಎಂದು ಆದೇಶ ಹೊರಡಿಸಿತ್ತು. ಇದೀಗ ಇದೇ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿ ಹಿಡಿದಿದೆ. ಇದರೊಂದಿಗೆ ಸಚಿವ ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಆರೋಪ ಮಾಡಿದ್ದ ಬಿಜೆಪಿಗೆ ಮುಖಭಂಗವಾದಂತಾಗಿದೆ.

 

 


Spread the love

LEAVE A REPLY

Please enter your comment!
Please enter your name here