ವಿಜಯಸಾಕ್ಷಿ ಸುದ್ದಿ, ಗದಗ
Advertisement
ಸಾರ್ವಜನಿಕರ ಸುರಕ್ಷತೆಗಾಗಿ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಗದಗ ತಾಲೂಕಿನ ನಾಗಾವಿ ಗ್ರಾಮದಲ್ಲಿ ಡಿವೈಎಸ್ಪಿ ಮುರ್ತುಜಾ ಖಾದ್ರಿ ನೇತೃತ್ವದಲ್ಲಿ ಪೊಲೀಸರು ಜಾಗೃತಿ ಮೂಡಿಸಿದರು.
ಪೊಲೀಸರು ಮನೆಗೆ ಬಂದಾಗ ಭಯ ಪಡದೇ ಮುಕ್ತವಾಗಿ ಸಮಸ್ಯೆ ಹೇಳಿಕೊಳ್ಳಿ, ಗ್ರಾಮದಲ್ಲಿ ಅಪರಿಚಿತ ವ್ಯಕ್ತಿಗಳು ಸುಳಿದಾಡಿದರೆ ಪೊಲೀಸರಿಗೆ ಮಾಹಿತಿ ನೀಡಿ,
ಸೈಬರ್ ಕ್ರೈಮ್ ಬಗ್ಗೆ ಎಚ್ಚರಿಕೆಯಿಂದ ಇರಲು ಗ್ರಾಮಸ್ಥರಿಗೆ ಮನವಿ ಮಾಡಿದರು.

ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಕರಪತ್ರಗಳನ್ನು ಗ್ರಾಮಸ್ಥರಿಗೆ ವಿತರಣೆ ಮಾಡಿ, ಯಾವುದೇ ಕಾರಣಕ್ಕೂ ಪೊಲೀಸರೆಂದರೆ ಭಯ ಬೀಳಬೇಡಿ, ಮುಕ್ತವಾಗಿ ಸಮಸ್ಯೆ ಹೇಳಿಕೊಳ್ಳಿ ಎಂದರು. ತುರ್ತು ಪರಿಸ್ಥಿತಿಯಲ್ಲಿ 112ಗೆ ಕರೆ ಮಾಡಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿಗಳಿದ್ದರು.