ಹಾಸನ: ಬೆಳ್ಳಂಬೆಳಗ್ಗೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ. ಭಾನುವಾರ ಮುಂಜಾನೆ ದರೋಡೆ ನಡೆಸಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ ಫೈರಿಂಗ್ ನಡೆದಿದೆ. ಫೈರಿಂಗ್ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿಯಾಗಿದ್ದು,
ದರೋಡೆ ಪ್ರಕರಣದಲ್ಲಿ ಭಾಗಿಯಗಿರುವ ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಡ್ರ್ಯಾಗನ್‌ನಿಂದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.
ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಗಾಯಗೊಂಡ ಆರೋಪಿ ಸತೀಶ್‌ನನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ. ಆರೋಪಿಯಿಂದ ದಾಳಿಗೊಳಗಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜು ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.