HomeKarnataka Newsದಿನಾ ಬೆಳಿಗ್ಗೆ ಎದ್ದ ಕೂಡಲೇ 'ನೆನೆಸಿಟ್ಟ ಬಾದಾಮಿ' ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

ದಿನಾ ಬೆಳಿಗ್ಗೆ ಎದ್ದ ಕೂಡಲೇ ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

For Dai;y Updates Join Our whatsapp Group

Spread the love

ಈ ಜಗತ್ತಿನಲ್ಲಿರುವ ಅತಿ ಆರೋಗ್ಯಕರ ಆಹಾರಗಳಲ್ಲಿ ಬಾದಾಮಿ ಪ್ರಮುಖ ಸ್ಥಾನ ಪಡೆಯುತ್ತದೆ. ಇವುಗಳಲ್ಲಿ ಅದ್ಭುತ ಆರೋಗ್ಯಕರ ಪ್ರಯೋಜನಗಳಿವೆ.

ಉತ್ತಮ ಹೃದಯದ ಆರೋಗ್ಯಕ್ಕೂ ಬಾದಾಮಿಗೂ ನಿಕಟ ಸಂಬಂಧ ಇರುವುದನ್ನು ಸಂಶೋಧನೆಗಳು ಈಗಾಗಲೇ ಸಾಬೀತುಗೊಳಿಸಿವೆ. ಮಧುಮೇಹಿಗಳೂ ಬಾದಾಮಿಯನ್ನು ಸುರಕ್ಷಿತವಾಗಿ ಸೇವಿಸಬಹುದು. ಒಣ ಬಾದಾಮಿಯ ಸೇವನೆಗಿಂತಲೂ ರಾತ್ರಿ ನೆನೆಸಿಟ್ಟು ಬೆಳಿಗ್ಗೆ ತಿನ್ನುವುದು ಅತ್ಯುತ್ತಮ.

ದೇಹವನ್ನು ಸದೃಢವಾಗಿ ಮತ್ತು ಆರೋಗ್ಯಕರವಾಗಿಡಲು ಜನರು ಅನೇಕ ರೀತಿಯ ಆರೋಗ್ಯಕರ ಆಹಾರವನ್ನು ಸೇವಿಸುತ್ತಾರೆ. ಅದರಲ್ಲಿಯೂ ಹಸಿ ತರಕಾರಿ, ತಾಜಾ ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ಸೇವಿಸುತ್ತಾರೆ. ಅವುಗಳಲ್ಲಿ ಡ್ರೈ ಫ್ರೂಟ್ಸ್ನಲ್ಲಿ ಒಂದಾದ ಬಾದಾಮಿ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ನೀವು ಬಾದಾಮಿಯನ್ನು ಒಣಗಿಸಿ, ನೆನೆಸಿ ಅಥವಾ ಒಣಗಿಸದೇ ಸಹ ತಿನ್ನಬಹುದು.

ಆದರೆ ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಡಬಲ್ ಆರೋಗ್ಯ ಪ್ರಯೋಜನ ಸಿಗುತ್ತದೆ. ಅಷ್ಟಕ್ಕೂ ಬಾದಾಮಿ ನೆನೆಸಿ ತಿನ್ನುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುವುದರ ಬಗ್ಗೆ ನಾವಿಂದು ತಿಳಿಯೋಣ.

ಜೀರ್ಣಕಾರಿ ಪ್ರಯೋಜನಗಳು: ಹೆಲ್ತ್ಲೈನ್ನಲ್ಲಿ ಪ್ರಕಟವಾದ ಸುದ್ದಿ ಲೇಖನದ ಪ್ರಕಾರ, ನೆನೆಸಿದ ಬಾದಾಮಿಯನ್ನು ಪ್ರತಿದಿನ ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಬಹುದು. ಇದು ಹೊಟ್ಟೆಗೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಹೊಟ್ಟೆ ಚೆನ್ನಾಗಿ ಸ್ವಚ್ಛವಾಗುತ್ತದೆ. ಇದನ್ನು ಸೇವಿಸುವುದರಿಂದ ಗ್ಯಾಸ್, ಹೊಟ್ಟೆ ಉಬ್ಬರ, ಅಜೀರ್ಣದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಮಧುಮೇಹವನ್ನು ನಿಯಂತ್ರಿಸುತ್ತದೆ: ಬಾದಾಮಿಯಲ್ಲಿ ಫೈಬರ್, ಪ್ರೋಟೀನ್ ಮತ್ತು ವಿಟಮಿನ್ ಇ ನಂತಹ ಅನೇಕ ಪೋಷಕಾಂಶಗಳಿವೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಇದರ ಸೇವನೆಯಿಂದ ದೇಹವು ಆರೋಗ್ಯಕರವಾಗಿರುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ: ಬಾದಾಮಿ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅದರಲ್ಲಿಯೂ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯಕ್ಕೆ ಹಾನಿಯಾಗುತ್ತದೆ. ಬಾದಾಮಿ ತಿಂದರೆ ಹೃದಯ ಆರೋಗ್ಯಕರವಾಗಿರುತ್ತದೆ. ಇದು ಆರೋಗ್ಯವನ್ನು ಕಾಪಾಡುತ್ತದೆ.

ಚರ್ಮಕ್ಕೆ ಪ್ರಯೋಜನಗಳು: ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ. ಇದಲ್ಲದೇ, ಬಾದಾಮಿಯು ಅನೇಕ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಚರ್ಮಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಒಣ ತ್ವಚೆಯ ಸಮಸ್ಯೆ ದೂರವಾಗುತ್ತದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!