ಬೆಂಗಳೂರು:- ದೆಹಲಿಯಲ್ಲಿ ದಾಖಲಾಗಿದ್ದ ಪ್ರಕರಣ ತನಿಖೆಗಾಗಿ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಇಡಿ ದಾಳಿ ಮಾಡಿದೆ.
Advertisement
ರಾಷ್ಟ್ರೀಕೃತ ಬ್ಯಾಂಕ್ ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿ ಪರಿಶೀಲಿಸಿದ್ದಾರೆ.