HomeKarnataka NewsKPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ED ಮೆಗಾ ಆಪರೇಷನ್: ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21...

KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ED ಮೆಗಾ ಆಪರೇಷನ್: ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಂಗಳವಾರ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ ಮತ್ತು ಗುಜರಾತ್‌ನ ಒಟ್ಟು 21 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು, ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಅಮಾನತುಗೊಂಡಿರುವ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, KPSC ಕಚೇರಿ, ಸದಸ್ಯೆ ಶಾಂತಾ ಹೊಸಮನಿ ಅವರ ನಿವಾಸ ಹಾಗೂ ‘M/s ಎಡುಟೆಸ್ಟ್ ಸೊಲ್ಯೂಷನ್ಸ್’ ಸಂಸ್ಥೆಗೆ ಸೇರಿದ ಸ್ಥಳಗಳ ಮೇಲೂ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದರ ಜೊತೆಗೆ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಮಧ್ಯವರ್ತಿಗಳು ಹಾಗೂ ನೇಮಕಾತಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿವಾಸಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ದಾಳಿ ವೇಳೆ ಪ್ರಮುಖ ದಾಖಲೆಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಭಾರಿ ಅಕ್ರಮ ಆರೋಪ

KPSC ಮೂಲಕ ನಡೆದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರತಿಯೊಬ್ಬ ಅಭ್ಯರ್ಥಿಯಿಂದ ಸುಮಾರು ₹70ರಿಂದ ₹80 ಲಕ್ಷದವರೆಗೆ ಲಂಚ ಪಡೆಯಲಾಗಿದೆ ಎಂಬ ಆರೋಪವೂ ಪ್ರಕರಣದಲ್ಲಿದೆ.

ಇದರ ಜೊತೆಗೆ ಉತ್ತರ ಪತ್ರಿಕೆಗಳನ್ನು ತಿದ್ದುಪಡಿ ಮಾಡಲಾಗಿದೆ ಹಾಗೂ KPSC ಅಧಿಕಾರಿಗಳ ಸಂಬಂಧಿಕರಿಗೆ ಅಕ್ರಮವಾಗಿ ಹುದ್ದೆಗಳನ್ನು ಕೊಡಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈ ಆರೋಪಗಳಿಗೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ಮುಂದುವರಿದ ಬೆನ್ನಲ್ಲೇ ಇದೀಗ ED ಅಧಿಕಾರಿಗಳು ಹಣಕಾಸು ವ್ಯವಹಾರಗಳು ಹಾಗೂ ಅಕ್ರಮ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅಮಾನತು

ತಮ್ಮ ಪುತ್ರಿಯರ ಅಕ್ರಮ ನೇಮಕಾತಿಗೆ ನೆರವಾದ ಆರೋಪದ ಹಿನ್ನೆಲೆಯಲ್ಲಿ KPSC ಸದಸ್ಯ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜುಲೈ 13ರಂದು ರಾಜ್ಯಪಾಲರು ಅಮಾನತುಗೊಳಿಸಿದ್ದರು.

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ED ದಾಳಿ ನಡೆಸಿರುವುದು ಪ್ರಕರಣದ ತನಿಖೆಗೆ ಮತ್ತಷ್ಟು ಮಹತ್ವ ನೀಡಿದೆ. ದಾಳಿ ಹಾಗೂ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img