ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ ಮಹೇಶ್ ಬಾಬು ನಟಿಸಿದ್ದರು.
ನಟಿಸಿದ್ದಕ್ಕೆ ಮಹೇಶ್ ಬಾಬು ಅವರಿಗೆ 5.9 ಕೋಟಿ ರೂ. ಸಂಭಾವನೆ ಸಿಕ್ಕಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
ತೆಲಂಗಾಣ ಪೊಲೀಸರು ಹೈದರಾಬಾದ್ ಪ್ರಾಪರ್ಟೀಸ್ ಲಿಮಿಟೆಡ್‌ನ ನರೇಂದ್ರ ಸುರಾನಾ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅನಧಿಕೃತ ಲೇಔಟ್‌ಗಳಲ್ಲಿ ಪ್ಲಾಟ್‌ಗಳನ್ನು ಮಾರಾಟ ಮಾಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ. ಒಂದೇ ಪ್ಲಾಟ್ ಅನ್ನು ಹಲವು ಬಾರಿ ಮಾರಾಟ ಮಾಡಿದ ಮತ್ತು ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಸುಳ್ಳು ಭರವಸೆಗಳನ್ನು ನೀಡಿದ ಆರೋಪ ಕಂಪನಿಯ ಮೇಲಿದೆ.