HomeKarnataka Newsಬೆಳ್ಳಂಬೆಳಗ್ಗೆಯೇ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ! ರೇಡ್ʼಗೆ ಅಸಲಿ ಕಾರಣವೇನು?

ಬೆಳ್ಳಂಬೆಳಗ್ಗೆಯೇ ಸಚಿವ ಸತೀಶ್ ಜಾರಕಿಹೊಳಿ ಮನೆಗಳ ಮೇಲೆ ಇಡಿ ದಾಳಿ! ರೇಡ್ʼಗೆ ಅಸಲಿ ಕಾರಣವೇನು?

For Dai;y Updates Join Our whatsapp Group

ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಪರವಾನಗಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮಂಜುನಾಥ್ ಅವರು ಬೆಳಗಾವಿಗೆ ವರ್ಗಾವಣೆಯಾಗುವ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಪ್ರಭಾವ ಬೀರಿದ್ದರು ಎಂಬ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ಮಂಜುನಾಥ್ ಅವರು ತಮ್ಮ ಸಂಬಂಧಿಕರು ಹಾಗೂ ಆಪ್ತರ ಹೆಸರಿನಲ್ಲಿ ಅಬಕಾರಿ ಪರವಾನಗಿಗಳನ್ನು ಪಡೆದುಕೊಂಡಿದ್ದರು ಎಂಬ ಆರೋಪವಿದೆ. ಈ ಮೂಲಕ ಅಕ್ರಮವಾಗಿ ಸಂಗ್ರಹಿಸಲಾದ ಹಣವನ್ನು ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಲಾಗಿತ್ತು ಎಂಬ ಆರೋಪದ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಈ ಪ್ರಕರಣದ ತನಿಖೆ ವೇಳೆ ಮಂಜುನಾಥ್ ಅವರ ನಿವಾಸದಲ್ಲಿ ಡೈರಿಯೊಂದು ಪತ್ತೆಯಾಗಿತ್ತು ಎನ್ನಲಾಗಿದೆ. ಈ ಡೈರಿಯಲ್ಲಿರುವ ಮಾಹಿತಿಯನ್ನು ಆಧರಿಸಿ ಜೂನ್ 24ರಿಂದ ಇ.ಡಿ. ಅಧಿಕಾರಿಗಳು ಪ್ರಕರಣದ ಕುರಿತು ಕೂಲಂಕುಷ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವೇಳೆ ಕೆಲವು ಮಹತ್ವದ ಸುಳಿವುಗಳು ದೊರೆತಿವೆ ಎನ್ನಲಾಗಿದ್ದು, ಡೈರಿಯಲ್ಲಿನ ದಾಖಲೆಗಳ ಆಧಾರದ ಮೇಲೆ ಸತೀಶ್ ಜಾರಕಿಹೊಳಿ ಅವರ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ದಾಳಿ ಹಾಗೂ ಪರಿಶೀಲನೆಯ ವೇಳೆ ಲಭ್ಯವಾಗುವ ದಾಖಲೆಗಳು ಮತ್ತು ಮಾಹಿತಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img