Muda Scam: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED ಟೀಮ್!

0
Spread the love

ನವದೆಹಲಿ:- ಕರ್ನಾಟಕ ಅಲ್ಲದೇ ಇಡೀ ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮುಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ED ಅಧಿಕಾರಿಗಳು ESIR ದಾಖಲಿಸಿದ್ದಾರೆ.

Advertisement

ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ.

ನಾಲ್ವರನ್ನು ಆರೋಪಿಗಳನ್ನಾಗಿಸಿ ಜಾರಿ ನಿರ್ದೇಶನಾಲಯ ಇಸಿಐಆರ್ ದಾಖಲು ಮಾಡಿದೆ. ಹೀಗಾಗಿ ನಾಲ್ವರ ವಿಚಾರಣೆಗೆ ಸಮನ್ಸ್ ನೀಡಲಿದೆ.

ಯಾವುದೇ ಸಂದರ್ಭದಲ್ಲಿ ಇಡಿಯಿಂದ ದಾಳಿಯಾಗುವ ಸಾಧ್ಯತೆ ಇದೆ. ದಾಖಲೆಗಳ ಪರಿಶೀಲನೆಗೆ ದಾಳಿ ಮಾಡಬಹುದು. ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಮುಡಾ ಕಚೇರಿ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ನಿವಾಸದ ಮೇಲೆ ಸಾಧ್ಯತೆಯಿದೆ.


Spread the love

LEAVE A REPLY

Please enter your comment!
Please enter your name here