ಪೋಷಕರಿಗೆ ಗುಡ್ ನ್ಯೂಸ್ ಕೊಟ್ಟ ಶಿಕ್ಷಣ ಇಲಾಖೆ: ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ!

0
Spread the love

ಬೆಂಗಳೂರು:- ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಟ್ಯೂಷನ್ ನೀಡಲು ಕರ್ನಾಟಕ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಮೂಲಕ ಬಡ ಪೋಷಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

Advertisement

ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.

ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್​ಗೆ ಕಳುಹಿಸುತ್ತಾರೆ.

ಒಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು ಸರ್ಕಾರಿ ಶಾಲಾ ಶಿಕ್ಷಕರನ್ನೇ ಬಳಕೆ ಮಾಡಿಕೊಂಡು ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.


Spread the love

LEAVE A REPLY

Please enter your comment!
Please enter your name here