ಮಂಗಳೂರಿನ ಶಾಲೆಗಳಿಗೆ ಶಿಕ್ಷಣ ಇಲಾಖೆ ಶಾಕ್: ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಬ್ರೇಕ್!?

0
Spread the love

ಮಂಗಳೂರು:- ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದ್ದು, ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದೆ.

Advertisement

ಶಾಲೆಗಳ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಇದು ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದ್ದು, ಈ ಬಾರಿ ಮಂಗಳೂರಿನ ಶಾಲಾ ಮೈದಾನಗಳಲ್ಲಿ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಅಚರಣೆಗೆ ಬ್ರೇಕ್ ಬೀಳುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಶಾಲಾ ಮೈದಾನ, ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ-ಉದ್ದೇಶಗಳಿಗೆ ಬಳಸಬಾರದು ಎಂದು ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಕರು ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸಬಾರದು ಎಂದು ಖಡಕ್​ ಸೂಚನೆ ಸಹ ನೀಡಿದೆ. ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಕೃಷ್ಣ ಜನ್ಮಾಷ್ಟಮಿ ಸಮೀಪಿಸುತ್ತಿದ್ದಂತೆಯೇ ಈ ಸುತ್ತೋಲೆ ಹೊರಡಿಸಿರುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಶೈಕ್ಷಣಿಕೇತರ ಚಟುವಟಿಕೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ಮರೇ ಹೊಣೆಗಾರರಾಗುತ್ತಾರೆಂದು ದಕ್ಷಿಣ ಕನ್ನಡ ಡಿಡಿಪಿಐ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಆದೇಶ ಬೆನ್ನಲ್ಲೇ ಗಣೇಶೋತ್ಸವ, ಅಷ್ಟಮಿ ಆಚರಣೆಗೆ ಅನುನತಿ ನೀಡಲು ಶಾಲಾಡಳಿತ ಮಂಡಳಿ ನಿರಾಕರಿಸಿದೆ. ಹೀಗಾಗಿ ಗ್ರಾಮದ ಸಂಘಟನೆಗಳು ಸ್ವಯಂ ಪ್ರೇರಿತವಾಗಿ ನಡೆಸಿಕೊಂಡು ಬರುತ್ತಿದ್ದ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ.


Spread the love

LEAVE A REPLY

Please enter your comment!
Please enter your name here