ವಿಜಯಸಾಕ್ಷಿ ಸುದ್ದಿ, ಮುಳಗುಂದ: ಸುಂದರ ಬದುಕು ನಿರ್ಮಿಸಿಕೊಳ್ಳಲು ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದು ಸುಧಾ ಹುಚ್ಚಣ್ಣವರ ಹೇಳಿದರು.
ಅವರು ಪಟ್ಟಣದ ಆರ್. ಎನ್. ದೇಶಪಾಂಡೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ನೈತಿಕ ಮೌಲ್ಯ, ವೃತ್ತಿಪರ ಕೌಶಲ್ಯ ಕಲಿಸುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ನಿರ್ಮಿಸುವುದು ಶಿಕ್ಷಣವಾಗಿದ್ದು, ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಎಂದರು.
ನಾಗರಾಜ ದೇಶಪಾಂಡೆ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆಯನ್ನು ತೊರೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಶಿಸ್ತು, ಸಮಯ ಪರಿಪಾಲನೆ, ಕಠಿಣ ಪರಿಶ್ರಮದಿಂದ ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಆರ್. ಎಂ. ಕಲ್ಲನಗೌಡರ ವಹಿಸಿದ್ದರು. ಅನುಪಮಾ, ರಾಜು ಬಿ. ಕೆ, ಸಿ. ಎಸ್. ತೋಟಿ, ವಿನಾಯಕ ಬಿ, ಡಾ. ಶಿವಪ್ಪ ಮುದಿಯಜ್ಜನವರ ಇದ್ದರು.



