HomeGadag Newsಶಿಕ್ಷಣವೇ ಜೀವನದ ದೊಡ್ಡ ಸಂಪತ್ತು: ಎ.ಆರ್. ಮಲ್ಲನಗೌಡ್ರ

ಶಿಕ್ಷಣವೇ ಜೀವನದ ದೊಡ್ಡ ಸಂಪತ್ತು: ಎ.ಆರ್. ಮಲ್ಲನಗೌಡ್ರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ವಿದ್ಯಾರ್ಥಿಗಳು ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಎ.ಆರ್. ಮಲ್ಲನಗೌಡ್ರ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಉಚಿತ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆಯಾಗದಂತೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಸವರಾಜ ಪಲ್ಲೇದ ಮಾತನಾಡಿ, ಪಠ್ಯಪುಸ್ತಕಗಳು ಜ್ಞಾನ ಮತ್ತು ಮೌಲ್ಯಗಳ ಭಂಡಾರವಾಗಿದ್ದು, ಶಿಸ್ತು, ನಿರಂತರ ಅಧ್ಯಯನ ಹಾಗೂ ಕಠಿಣ ಪರಿಶ್ರಮದಿಂದ ಮಾತ್ರ ಗುರಿ ಸಾಧನೆ ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಸ್.ಸಿ. ಗುಳಗಣ್ಣವರ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೋಷಕರ ಸಹಕಾರವೂ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗಣ್ಯರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದರು. ದಾದಾಪೀರ ನದಾಫ, ಅನ್ನಪೂರ್ಣ ಸಂಕನಗೌಡ್ರ, ರಾಚಯ್ಯ ರೇಣುಕಮಠ, ವಿದ್ಯಾ ಜಕ್ಕಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಸರ್ಕಾರದ ಶೈಕ್ಷಣಿಕ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು.”

– ಎ.ಆರ್. ಮಲ್ಲನಗೌಡ್ರ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img