ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಗದಗ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಗದಗ ನಗರದ ಎಸ್.ಎಸ್.ಕೆ ಶ್ರೀ ಜಗದಂಬಾ ದೇವಸ್ಥಾನ/ಸಮಾಜ ಪಂಚ ಟ್ರಸ್ಟ್ ಕಮಿಟಿಯ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಗೌರವ ಕಾರ್ಯದರ್ಶಿ ವಿನೋದ ಆರ್.ಶಿದ್ಲಿಂಗ, ಶಾಲಾ ಚೇರಮನ್ ಶ್ರೀನಿವಾಸ ಖಟವಟೆ ಹಾಗೂ ಪದಾಧಿಕಾರಿ ಪರಶುರಾಮ ಬದಿಯವರು ಸಚಿವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ನಿಯಮಗಳನುಸಾರ ಖಾಸಗಿ ಶಾಲೆಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.



