ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವನ್ನು ಆಚರಿಸಲಾಯಿತು.
Advertisement
ಮುಖ್ಯ ಶಿಕ್ಷಕ ಮಲ್ಲೇಶ ಡಿ.ಎಚ್ ಮಾತನಾಡಿ, ಸಾಮಾಜಿಕ ವ್ಯವಸ್ಥೆಯಲ್ಲಿ ತುಂಬಿಕೊAಡಿದ್ದ ಮೂಢನಂಬಿಕೆ, ಕಂದಾಚಾರಗಳಿAದ ಮನನೊಂದು ಹೆಣ್ಣು ಮಕ್ಕಳಿಗೆ ಶಿಕ್ಷಣ ಪ್ರಾರಂಭಿಸಿ ಶೈಕ್ಷಣಿಕ ಕ್ರಾಂತಿ ಮಾಡಿ, ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಸಾವಿತ್ರಿಬಾಯಿ ಫುಲೆ ನಮಗೆಲ್ಲ ಅಕ್ಷರದವ್ವ ಎಂದು ಹೇಳಿದರು.
ಶಿಕ್ಷಕರಾದ ಎಸ್.ಜಿ. ಅಮ್ಮಿನಭಾವಿ, ಎಸ್.ಟಿ. ಹಳಕಟ್ಟಿ, ಪಿ.ಬಿ. ಕಿಲಬನವರ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾರುತಿ ಪವಾರ, ಗಂಗವ್ವ ಲಮಾಣಿ, ಸಾವಿತ್ರಿ ರಾಠೋಡ, ದೇವಕ್ಕ ಲಮಾಣಿ ಸೇರಿದಂತೆ ಶಾಲಾ ಮಕ್ಕಳು ಇದ್ದರು.