ಗಣೇಶ ಹಬ್ಬದ ಎಫೆಕ್ಟ್: ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​; ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

0
Spread the love

ಬೆಂಗಳೂರು:- ಗಣೇಶ ಹಬ್ಬದ ಪ್ರಯುಕ್ತ ನಗರದ ಹಲವು ರಸ್ತೆಗಳಲ್ಲಿ ಸಂಚಾರ ಬಂದ್ ಮಾಡಿ ಸಂಚಾರ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Advertisement

ಗಣೇಶ ಹಬ್ಬದ ಪ್ರಯುಕ್ತ ಗಣೇಶ ಮಂಡಳಿಗಳು ಸಾರ್ವಜನಿಕ ಗಣಪನನ್ನು ಕೂರಿಸಲು ತಯಾರಾಗಿವೆ. ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ.

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್​ ಕಲ್ಯಾಣಿಯಲ್ಲಿ ಸೆಪ್ಟೆಂಬರ್​ 7 ರಿಂದ 9ರವರೆಗೆ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಕೆರೆಯ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಈ ದಿನಾಂಕಗಳಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ”
ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇಜಿ ಕಡೆಯಿಂದ ಕನ್ನಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಯಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣಸ್ವಾಮಿ ಮೊದಲಿಯಳ ರಸ್ತೆಯಲ್ಲಿ, ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕಣ್ಮು ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ವಿಕಮುಖ ಸಂಚಾರಕ್ಕೆ, ಅನುವು ಮಾಡಿಕೊಡಲಾಗಿದೆ.

ಮಾರ್ಗ ಬದಲಾವಣೆ:
ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚಿಟ್ಟೆ ರಸ್ತೆ ಡಿಕನ್ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೊಗಬಹುದು.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟ‌ರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರೆ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.


Spread the love

LEAVE A REPLY

Please enter your comment!
Please enter your name here