HomeGadag Newsಪ್ರಯತ್ನವೇ ಯಶಸ್ಸಿಗೆ ದಾರಿ

ಪ್ರಯತ್ನವೇ ಯಶಸ್ಸಿಗೆ ದಾರಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಉಪ್ಪಾರ ಸಮಾಜದಲ್ಲಿನ ವಿದ್ಯಾವಂತರು, ಶಿಕ್ಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮುಟ್ಟಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಸಹಯೋಗದಲ್ಲಿ ರವಿವಾರ ಮಹರ್ಷಿ ಶ್ರೀ ಭಗೀರಥ ಜಯಂತಿಯ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಮಹರ್ಷಿ ಶ್ರೀ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಮಹರ್ಷಿ ಭಗೀರಥರು ತಮ್ಮ ಅಪಾರ ಪರಿಶ್ರಮದಿಂದ ಭೂಮಿಗೆ ಗಂಗೆಯ ನೀರನ್ನು ತಂದ ಮಹಾನ್ ಸಾಧಕರಾಗಿದ್ದಾರೆ. ಪ್ರಯತ್ನವೇ ಯಶಸ್ಸಿಗೆ ದಾರಿ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

ಸಾಮಾಜಿಕ ಹಿನ್ನಲೆಯಲ್ಲಿ ಬೆಳೆಯುತ್ತಿರುವ ಮಕ್ಕಳಿಗೆ ಶಿಕ್ಷಣವೇ ಶಕ್ತಿ. ಅದನ್ನು ಸದುಪಯೋಗಪಡಿಸಿಕೊಂಡರೆ, ಸಮಾಜ ಮತ್ತು ದೇಶಕ್ಕೆ ದೊಡ್ಡ ಕೊಡುಗೆ ನೀಡಬಹುದಾಗಿದೆ. ನಿಮ್ಮ ಸಮಾಜವನ್ನು ಗುರುತಿಸುವಂತೆ ಆಗಬೇಕಾದರೆ ಡಾ. ಎಪಿಜೆ ಅಬ್ದುಲ್ ಕಲಾಂ, ಡಾ. ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣದ ಶಕ್ತಿ ಏನೆಂಬುದನ್ನು ನಮಗೆಲ್ಲ ತೋರಿಸಿಕೊಟ್ಟಿದ್ದಾರೆ. ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕೆಂದು ಸಂಕನೂರ ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಹರ್ಷಿ ಭಗೀರಥರ ವ್ಯಕ್ತಿತ್ವ ಮತ್ತು ಕೊಡುಗೆ ಕುರಿತು ಮಂಜುನಾಥ ಹುಯಿಲಗೋಳ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಭೀಮನಗೌಡ ಪಾಟೀಲ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಹಿರಿಯರಾದ ಹನುಮಂತಪ್ಪ ಗರಗ, ಉಪ್ಪಾರ ಸಂಘದ ಗೌರವಾಧ್ಯಕ್ಷ ಅನಿಲ ಗರಗ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಎಸ್. ಬುರುಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ ಸೇರಿದಂತೆ ಉಪ್ಪಾರ ಸಮಾಜ ಬಾಂಧವರು ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!