ಬೆಂಗಳೂರು:- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ನಡೆದ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಬಂಧನಕ್ಕೊಳಗಾಗಿದ್ದ ಚಂದ್ರು, ವಿಶ್ವನಾಥ್, ಕೃಷ್ಣಮೂರ್ತಿಗೆ ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಶಾಸಕರ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದರು. ಇದೀಗ ಕೋರ್ಟ್ ಆ ಮೂವರು ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಘಟನೆ ಹಿನ್ನೆಲೆ:-
ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ನಗರದ ಕಂಠೀರವ ಸ್ಟುಡಿಯೋ ಬಳಿ ಡಿಸೆಂಬರ್ 25 ಶಾಸಕ ಮುನಿರತ್ನ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ಆಯೋಜಿಸಿದ್ದರು. ಅದೇ ಸಂದರ್ಭದಲ್ಲಿ ಮುನಿರತ್ನ ಅವರ ತಲೆಗೆ ಮೊಟ್ಟೆ ಎಸೆದಿದ್ದರು. ಇದರ ಬೆನ್ನಲ್ಲೇ ನಂದಿನ ಲೇಔಟ್ ಠಾಣೆ ಪೊಲೀಸರು ವಿಶ್ವನಾಥ, ಕೃಷ್ಣಮೂರ್ತಿ ಮತ್ತು ಚಂದ್ರು ಎನ್ನುವವರನ್ನು ಬಂಧಿಸಿದ್ದರು.