ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ದಾಖಲಾಯ್ತು FIR!

0
Spread the love

ಬೆಂಗಳೂರು:-ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮುನಿರತ್ನ ಅವರ ದೂರಿನ ಹಿನ್ನೆಲೆ ಈ FIR ದಾಖಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆ ಮಾಡುವ ಉದ್ದೇಶದ ಮುಂದುವರಿದ ಭಾಗವಾಗಿ ಸಂಚಿನಂತೆ ಮೊಟ್ಟೆ ಎಸೆದಿದ್ದಾರೆಂದು ಮುನಿರತ್ನ ದೂರಿನಲ್ಲಿ ಉಲ್ಲೇಖಿಸಿದ್ದರು.

ಇನ್ನೂ ವಿಶ್ವನಾಥ, ಕೃಷ್ಣಮೂರ್ತಿ, ಚಂದ್ರು ಮೊಟ್ಟೆ ಎಸೆದಿದ್ದಾರೆಂಬ ಆರೋಪ ಎದುರಿಸುತ್ತಿದ್ದು, ಇವರನ್ನು ಘಟನಾ ಸ್ಥಳದಲ್ಲೇ ಬುಧವಾರ ಪೊಲೀಸರು ವಶಕ್ಕೆ ಪಡೆದಿದ್ದರು.

ಘಟನೆ ನಂತರ ಮುನಿರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಪಡೆದು ಗುರುವಾರ ಬೆಳಗ್ಗೆ ಡಿಸ್​ಚಾರ್ಜ್ ಆಗಿದ್ದಾರೆ.

ಮತ್ತೊಂದೆಡೆ ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ನೀಡಿದ ಪ್ರತಿದೂರಿನಲ್ಲಿ ಉಲ್ಲೇಖಿಸಲಾಗಿದೆ.


Spread the love

LEAVE A REPLY

Please enter your comment!
Please enter your name here