HomeKarnataka Newsತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ಹೋದವರು ನೀರುಪಾಲು: ಒಂದೇ ಕುಟುಂಬದ 8 ಮಂದಿ ಸಾವು!

ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ಹೋದವರು ನೀರುಪಾಲು: ಒಂದೇ ಕುಟುಂಬದ 8 ಮಂದಿ ಸಾವು!

For Dai;y Updates Join Our whatsapp Group

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದವರು ನೀರಿನ ರಭಸಕ್ಕೆ ಸಿಲುಕಿ ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 2 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಒಟ್ಟು 14 ಜನರು ಇಂದು ಬೆಳಗ್ಗೆ ನದಿಗೆ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಭಸವಾದ ನೀರಿನ ಸುಳಿಗೆ ಎಲ್ಲರೂ ಸಿಲುಕಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ 4 ಜನರನ್ನು ರಕ್ಷಿಸಲಾಗಿದ್ದು, ಉಳಿದವರಲ್ಲಿ 8 ಮಂದಿ ಮೃತದೇಹಗಳು ಪತ್ತೆಯಾಗಿವೆ. ಮೃತರಲ್ಲಿ ಒಬ್ಬ ಪುರುಷ ಹಾಗೂ 7 ಮಹಿಳೆಯರು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೃತರನ್ನು ಭಟ್ಕಳದ ಶಿರಾಲಿ ಮೂಲದವರು ಎಂದು ಗುರುತಿಸಲಾಗಿದ್ದು, ಎಲ್ಲರೂ ಒಂದೇ ಕುಟುಂಬದ ಸದಸ್ಯರು ಎಂಬ ಮಾಹಿತಿ ದೊರೆತಿದೆ. ಮೃತದೇಹಗಳನ್ನು ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಭಟ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!