ದೊಡ್ಮನೆ ಕುಟುಂಬದ ಕುಡಿ ಯುವರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ‘ಎಕ್ಕ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಸಿನಿಮಾ ಸದ್ಯ ಬಿಡುಗಡೆ ಆಗಿರುವ ಟ್ರೈಲರ್ ಮೂಲಕ ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.
ಎಕ್ಕ ಯುವ ರಾಜ್‌ಕುಮಾರ್ ನಟನೆಯ ಎರಡನೇ ಸಿನಿಮಾವಾಗಿದ್ದು ರೋಹಿತ್ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಸಖತ್ ಸೌಂಡ್ ಮಾಡುತ್ತಿದ್ದು ಸದ್ಯ ರಿಲೀಸ್ ಮಾಡಿರುವ ಟ್ರೈಲರ್ ಸಖತ್ ನಿರೀಕ್ಷೆ ಮೂಡಿಸಿದೆ. ಹಳ್ಳಿಯಲ್ಲಿ ಆರಾಮಾಗಿ ಇದ್ದ ಮುತ್ತು ಪಟ್ಟಣ ಸೇರೋದು ಯಾಕೆ? ಏನೋ ಮಾಡಲು ಹೋಗಿ ಮತ್ತೇನೋ ಆಗಿ ಮುಂದೇನು? ಸಾಮಾನ್ಯ ಹುಡುಗನೊಬ್ಬ ಭೂತಕ ಲೋಕಕ್ಕೆ ಹೇಗೆ ಕಾಲಿಡುತ್ತಾನೆ ಎಂಬುದನ್ನು ತೋರಿಸಲು ಹೊರಟಿದ್ದಾರೆ ನಿರ್ದೇಶಕ ರೋಹಿತ್ ಪದಕಿ. ಎಕ್ಕ ಸಿನಿಮಾ ಸಿನಿಮಾದಲ್ಲಿ ಸಂಜನಾ ಆನಂದ್ ಮತ್ತು ಸಂಪದಾ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಕೈಜೋಡಿಸಿ ‘ಎಕ್ಕ’ ಸಿನಿಮಾವನ್ನು ನಿರ್ಮಾಣ ಮಾಡಿವೆ. ಜುಲೈ 18ರಂದು ‘ಎಕ್ಕ’ ಸಿನಿಮಾ ತೆರೆಕಾಣಲಿದ್ದು ಸದ್ಯ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ.