ಬೆಂಗಳೂರು: ಕೆಟಿಎಂ ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದ ಸಾವನ್ನಪ್ಪಿರುವ ಘಟನೆ ನಾಗರಬಾವಿಯ ಮುಖ್ಯರಸ್ತೆಯಲ್ಲಿ ನಿನ್ನೆ ಬೆಳಗ್ಗೆ ನಡೆದಿದೆ. ಮಂಗನಹಳ್ಳಿಯ ಮಧು, (74) ಮೃತ ದುರ್ಧೈವಿಯಾಗಿದ್ದು,
Advertisement
ಕೆಟಿಎಂ ಬೈಕ್ ಸವಾರ ಶ್ರೀನಿವಾಸ್ ಎಂಬಾತನಿಂದ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಮಧು ತಲೆಗೆ ತೀವ್ರ ಪೆಟ್ಟಾಗಿತ್ತು.
ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಆರೋಪಿ ಶ್ರೀನಿವಾಸ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.


