ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರಿದಿದೆ. ಬೆಳಗ್ಗೆ ವಾಕಿಂಗ್ಗೆ ಹೋಗುತ್ತಿದ್ದ ವ್ಯಕ್ತಿ ಮೇಲೆ ಬೀದಿನಾಯಿಗಳು ದಾಳಿ ಮಾಡುವ ಮೂಲಕ ಬಲಿ ಪಡೆದಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Advertisement
ನಗರದಲ್ಲಿ ಬೀದಿನಾಯಿಗಳ ದಾಳಿಗೆ 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ. ಸೀತಪ್ಪ ಅವರು ಸೋಮವಾರ ಬೆಳಗ್ಗೆ ವಾಕಿಂಗ್ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು,
ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ. ನಾಯಿಗಳ ದಾಳಿಗೆ ವೃದ್ಧ ಸೀನಪ್ಪ ಕೊನೆಯುಸಿರೆಳೆದಿದ್ದಾರೆ. ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.