ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ ವೃದ್ಧ..!

0
Spread the love

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಅದರಲ್ಲೂ ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳನ್ನು ದಿನೇ ದಿನೇ ಹೆಚ್ಚಾಗುತ್ತಲೇ ಇದೆ.

Advertisement

ಇದೀಗ ಮತ್ತೊರ್ವ ವ್ಯಕ್ತಿ ಹೃದಯಾಘಾತಕ್ಕೆ ಸಾವನಪ್ಪಿರುವ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಬಿ.ಹೊಸಳ್ಳಿ ಗ್ರಾಮದ 75 ವರ್ಷದ ಸುಮಿತ್ರೆಗೌಡ ಎಂಬ ವೃದ್ಧ ಕೂಡ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಮನೆಯಲ್ಲೇ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸುಮಿತ್ರೆಗೌಡ, ತಕ್ಷಣವೇ ಸಾವನ್ನಪ್ಪಿದ್ದಾರೆ. ಈ ಘಟನೆಯು ವಯಸ್ಸಾದವರಲ್ಲಿಯೂ ಹೃದಯಾಘಾತದ ಸಂಭವವು ಹೆಚ್ಚುತ್ತಿರುವುದನ್ನು ತೋರಿಸುತ್ತದೆ. ಸುಮಿತ್ರೆಗೌಡರ ಕುಟುಂಬವು ಈ ಆಕಸ್ಮಿಕ ಸಾವಿನಿಂದ ದಿಗ್ಭ್ರಮೆಗೊಂಡಿದೆ. ಸದ್ಯ ಕರ್ನಾಟಕದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ.


Spread the love

LEAVE A REPLY

Please enter your comment!
Please enter your name here